HomeLatest Newsಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ ಸರ್ಕಾರ: ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ ಸರ್ಕಾರ: ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಬೆಂಗಳೂರು: ಶಿಕಾರಿಪುರದ ಬಿಜೆಪಿ ಮುಖಂಡನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ.

ನಿಗಮ ಮಂಡಳಿ ಮತ್ತು ಪ್ರಾಧಿಕಾರದ ಅಧ್ಯಕ್ಷರಾಗಿರುವ 54 ಮಂದಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಇತ್ತೀಚೆಗಷ್ಟೇ ಆದೇಶಿಸಿದೆ. ಆದರೆ ಇವರಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಮತ್ತು ಶಿಕಾರಿಪುರದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರ ಹೆಸರು ಕೂಡ ಉಲ್ಲೇಖಿಸಲಾಗಿದೆ. ಬಿ.ಡಿ. ಭೂಕಾಂತ್ ಬಿಜೆಪಿ ಮುಖಂಡರಾಗಿದ್ದಾರೆ. ಅವರ ಪತ್ನಿ ಬಿಜೆಪಿಯಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿರುವುದು ಸ್ವಪಕ್ಷ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮುಖ ನಿಗಮ ಮಂಡಳಿಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಇದೀಗ ಎಲ್ಲಾ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯವಾಗುವಂತೆ ಸರ್ಕಾರ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಿದೆ. ಇವರಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ ಅವರಿಗೆ ಸಚಿವ ಸ್ಥಾನಮಾನ ನೀಡಿರುವುದಕ್ಕೆ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular