HomeLatest NewsBREAKING: ಹುಬ್ಬಳ್ಳಿಯಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ: ನೂರಕ್ಕೂ ಹೆಚ್ಚು ಕೈ ಕಾರ್ಯಕರ್ತರು...

BREAKING: ಹುಬ್ಬಳ್ಳಿಯಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ: ನೂರಕ್ಕೂ ಹೆಚ್ಚು ಕೈ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಭುಗಿಲೆದ್ದಿದೆ. ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯವರೆಗೆ ತೆರಳಿ, ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಕಚೇರಿ ಬಳಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆದಿದ್ದು, ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದ ಬೆನ್ನಲ್ಲೇ ಪೊಲೀಸರು ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular