HomeKarnatakaBIG NEWS: ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು; ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ...

BIG NEWS: ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು; ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?; ವಿಪಕ್ಷಗಳಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಹೇಗಿದೆಯೆಂದರೆ ನಡು ನೀರಿನಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನ್ನೊನ್ನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ ಎಂದು ಲೇವಡಿ ಮಾಡಿದೆ.

ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು. ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ, ಜೆಡಿಎಸ್ ನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು. ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ? ಎಂದು ಟಾಂಗ್ ನೀಡಿದೆ.

ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದರು. ಆದರೆ ಈಗ ಜಾತ್ಯಾತೀತತೆಯನ್ನೇ ವಿಸರ್ಜಿಸಲು ಹೊರಟಿದ್ದಾರೆ. ‘ಜನತಾ ದಳ’ ಎಂಬ ಹೆಸರನ್ನು ‘ಕಮಲ ದಳ’ ಎಂದು ಬದಲಿಸಿಕೊಂದರೆ ಒಳಿತು ಎಂದು ಟೀಕಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular