HomeLatest NewsBIG NEWS: ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

BIG NEWS: ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಆಕ್ಷೇಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿರುವ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜನವರಿ 31ರವರೆಗೆ ನಡೆಯಲಿದೆ. ವಿಧಾನಮಂಡಲ ಅಧಿವೇಶನದ ಮೊದಲ ದಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ಸದನದಿಂದ ನಿರ್ಗಮಿಸಿರುವ ಘಟನೆ ನಡೆದಿದೆ. ಇದು ಭಾರಿ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ನಡೆ ವಿರುದ್ಧ ಆಡಳಿತ ಪಕ್ಷ ಕಾಂಗ್ರೆಸ್ ಕಾನೂನು ಹೋರಾಟಕ್ಕೆ ಮುಂದಾಗಿದ್ದರೆ, ವಿಪಕ್ಷ ಬಿಜೆಪಿ ರಾಜ್ಯಪಾಲರ ನಡೆಯನ್ನು ಸಮರ್ಥಿಸಿಕೊಂಡಿದೆ. ಈ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ವಿಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಜನವರಿ 28ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular