HomeLatest NewsBREAKING: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ ಪಡೆ: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರು...

BREAKING: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ ಪಡೆ: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಗೆ ಕಾಂಗ್ರೆಸ್ ತೀವ್ರ ಆಕ್ರ‍ೊಶ ವ್ಯಕ್ತಪಡಿಸಿದೆ. ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ನರೇಗಾ ಯೋಜನೆಗೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿರುವ ವಿಶೇಷ ಜಂಟಿ ಅಧಿವೇಶನ ನಿನ್ನೆಯಿಂದ ಆರಂಭವಾಗಿದ್ದು, ಆದರೆ ಅಧಿವೇಶನದ ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ರಾಜ್ಯ ಸರ್ಕಾರ ಬರೆದುಕೊಟ್ಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಕೇವಲ ಮೂರು ಸಾಲಿನಲ್ಲಿ ಮಾತು ಮುಗಿಸಿ ಸದನದಿಂದ ನಿರ್ಗಮಿಸಿದ್ದರು. ರಾಜ್ಯಪಾಲರ ಈ ನಡೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಹೋರಾಟ ನಡೆಸಿವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುಡುಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಪಾಲರ ನಡೆ ಅಸಂವಿಧಾನಿಕ, ಕರ್ನಾಟಕ ವಿಧಾನಸಭೆಗೆ ಮಾಡಿರುವ ಅವಮಾನ ಎಂದು ಕಿಡಿಕಾರಿರುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನೆ ತೀವ್ರಗೊಳಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಅಧಿವೇಶನದಲ್ಲಿ ಭಾಷಣ ಮಾಡದೇ ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇದು ಸಂವಿಧಾನಕ್ಕೆ ತೋರುವ ಅಗೌರವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular