BIG NEWS: ಉಪಚುನಾವಣೆ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ 138ಕ್ಕೆ ಏರಿದ ಕಾಂಗ್ರೆಸ್ ಸದಸ್ಯ ಬಲ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಸದಸ್ಯ ಬಲ ವಿಧಾನಸಭೆಯಲ್ಲಿ 136 ರಿಂದ 138ಕ್ಕೆ ಹೆಚ್ಚಳವಾಗಿದೆ.

ಜೆಡಿಎಸ್ ನ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿತ್ತು. ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರ ತೆರವಾಗಿತ್ತು. ಜೆಡಿಎಸ್ ಮತ್ತು ಬಿಜೆಪಿ ಈ ಕ್ಷೇತ್ರಗಳನ್ನು ಕಳೆದುಕೊಂಡಿವೆ.

ಈ. ತುಕಾರಾಂ ಸಂಸದರಾಗಿ ಆಯ್ಕೆಯಾಗಿದ್ದರಿಂದ ಸಂಡೂರಿನಲ್ಲಿ ಅವರ ಪತ್ನಿ ಅನ್ನಪೂರ್ಣ ಜಯಗಳಿಸಿದ್ದಾರೆ. ತುಕಾರಾಂ ಸಂಸದರಾಗಿದ್ದರಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 136ರಿಂದ 135 ಕ್ಕೆ ಇಳಿದಿತ್ತು. ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸಿದ್ದು, ವಿಧಾನಸಭೆಯಲ್ಲಿ ತನ್ನ ಬಲವನ್ನು 138ಕ್ಕೆ ಹೆಚ್ಚಿಸಿಕೊಂಡಿದೆ. ಬಿಜೆಪಿ ಸದಸ್ಯ ಬಲ 66 ರಿಂದ 65ಕ್ಕೆ ಕುಸಿತವಾಗಿದೆ. ಜೆಡಿಎಸ್ ಸದಸ್ಯ ಬಲ 19 ರಿಂದ 18ಕ್ಕೆ ಕುಸಿತ ಕಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read