HomeKarnatakaBIG NEWS : ಟ್ರ್ಯಾಕ್ಟರ್ ಹರಿಸಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳ...

BIG NEWS : ಟ್ರ್ಯಾಕ್ಟರ್ ಹರಿಸಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳ ವಿರುದ್ಧ FIR , ಓರ್ವ ಅರೆಸ್ಟ್

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಜೇವರ್ಗಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಓರ್ವ ಆರೋಪಿ ಮರಳು ದಂಧೆಕೋರನನ್ನು ಬಂಧಿಸಲಾಗಿದೆ.

ಸಿದ್ದಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿ ಸಾಯಿಬಣ್ಣ ಎಂಬಾತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನಾರಾಯಣಪುರ ಸಮೀಪ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಮೈಸೂರ್ ಚವಾಣ್ ಅವರನ್ನು ಹತ್ಯೆ ಮಾಡಲಾಗಿದೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಮೈಸೂರ್ ಚವಾಣ್ ತಪಾಸಣೆಗೆ ಹೋಗಿದ್ದರು. ಅಕ್ರಮ ಮರಳು ಸಾಗಾಟ ತಡೆಯಲು ಹೋದ ಅವರ ಮೇಲೆ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿದ್ದಾರೆ.ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ. ನೆಲೋಗಿ ಠಾಣೆಯಲ್ಲಿ ಅವರು ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಕ್ರಮ ಮರಳು ಸಾಗಾಣೆ ಮಾಡುವ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular