ಮಧುಗಿರಿ: ಸಚಿವ ಸ್ಥಾನದಿಂದ ನನ್ನನ್ನು ಇಳಿಸಲು ಮೂವರು ದೆಹಲಿಯಲ್ಲಿ ವ್ಯವಸ್ಥಿತವಾಗಿ ಪಿತೂರಿ ನಡೆಸಿದ್ದಾರೆ. ಈ ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈಗ ಅದನ್ನು ಬಳಸುವುದಿಲ್ಲ. ಮುಂದೆ ಕಾಲ ಬರುತ್ತದೆ ಎಂದು ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಮಧುಗಿರಿಯಲ್ಲಿ ಮಾತನಾಡಿದ ಅವರು ಸಂಪುಟದಿಂದ ವಜಾಗೊಂಡ ಬಳಿಕ ಗುಡುಗಿದ್ದಾರೆ. ನನ್ನ ವಿರುದ್ಧ ದೆಹಲಿಯಲ್ಲಿ ಮೂವರು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಿದ್ದಾರೆ. ನನಗೂ ಷಡ್ಯಂತ್ರ ಮಾಡುವುದು ಗೊತ್ತಿದೆ. ಆದರೆ ಅದಕ್ಕೆ ಸಮಯ ವ್ಯಯ ಮಾಡುವ ಬದಲು ಜನರ ಅಭಿವೃದ್ಧಿಗೆ ಬಳಸುತ್ತೇನೆ ಎಂದು ಹೇಳಿದ್ದಾರೆ.
ನನ್ನನ್ನು ಸಚಿವ ಸ್ಥಾನದಿಂದ ತೆಗೆಯುವುದು ಮುಖ್ಯಮಂತ್ರಿಯವರಿಗೆ ಗೊತ್ತಿರಲಿಲ್ಲ. ಅವರು ಹೈಕಮಾಂಡ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಅಧಿವೇಶನ ಮುಗಿದ ನಂತರ ದೆಹಲಿಗೆ ಹೋಗಿ ಬಂದು ಸಿಹಿ ಸುದ್ದಿ ನೀಡುತ್ತೇನೆ ಎಂದು ರಾಜಣ್ಣ ತಿಳಿಸಿದ್ದಾರೆ.
TAGGED:ಸಚಿವ ಸ್ಥಾನ