HomeLatest Newsಸಚಿವ ಸ್ಥಾನದಿಂದ ನನ್ನನ್ನು ಇಳಿಸಲು ಮೂವರಿಂದ ಪಿತೂರಿ: ನನಗೂ ಆ ವಿದ್ಯೆ ಗೊತ್ತು: ಕೆ.ಎನ್. ರಾಜಣ್ಣ

ಸಚಿವ ಸ್ಥಾನದಿಂದ ನನ್ನನ್ನು ಇಳಿಸಲು ಮೂವರಿಂದ ಪಿತೂರಿ: ನನಗೂ ಆ ವಿದ್ಯೆ ಗೊತ್ತು: ಕೆ.ಎನ್. ರಾಜಣ್ಣ

ಮಧುಗಿರಿ: ಸಚಿವ ಸ್ಥಾನದಿಂದ ನನ್ನನ್ನು ಇಳಿಸಲು ಮೂವರು ದೆಹಲಿಯಲ್ಲಿ ವ್ಯವಸ್ಥಿತವಾಗಿ ಪಿತೂರಿ ನಡೆಸಿದ್ದಾರೆ. ಈ ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈಗ ಅದನ್ನು ಬಳಸುವುದಿಲ್ಲ. ಮುಂದೆ ಕಾಲ ಬರುತ್ತದೆ ಎಂದು ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಮಧುಗಿರಿಯಲ್ಲಿ ಮಾತನಾಡಿದ ಅವರು ಸಂಪುಟದಿಂದ ವಜಾಗೊಂಡ ಬಳಿಕ ಗುಡುಗಿದ್ದಾರೆ. ನನ್ನ ವಿರುದ್ಧ ದೆಹಲಿಯಲ್ಲಿ ಮೂವರು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಿದ್ದಾರೆ. ನನಗೂ ಷಡ್ಯಂತ್ರ ಮಾಡುವುದು ಗೊತ್ತಿದೆ. ಆದರೆ ಅದಕ್ಕೆ ಸಮಯ ವ್ಯಯ ಮಾಡುವ ಬದಲು ಜನರ ಅಭಿವೃದ್ಧಿಗೆ ಬಳಸುತ್ತೇನೆ ಎಂದು ಹೇಳಿದ್ದಾರೆ.

ನನ್ನನ್ನು ಸಚಿವ ಸ್ಥಾನದಿಂದ ತೆಗೆಯುವುದು ಮುಖ್ಯಮಂತ್ರಿಯವರಿಗೆ ಗೊತ್ತಿರಲಿಲ್ಲ. ಅವರು ಹೈಕಮಾಂಡ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ಅಧಿವೇಶನ ಮುಗಿದ ನಂತರ ದೆಹಲಿಗೆ ಹೋಗಿ ಬಂದು ಸಿಹಿ ಸುದ್ದಿ ನೀಡುತ್ತೇನೆ ಎಂದು ರಾಜಣ್ಣ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular