HomeKarnatakaಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ಷಡ್ಯಂತ್ರ: ರೇಣುಕಾಚಾರ್ಯ ಗುಡುಗು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ಷಡ್ಯಂತ್ರ: ರೇಣುಕಾಚಾರ್ಯ ಗುಡುಗು

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆಯುತ್ತಿದ್ದು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಗುಡುಗಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಇದು ಹೀಗೆಯೇ ಮುಂದುವರೆದರೆ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಧ್ವನಿ ಯತ್ತಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಕೆಲವರು ಪ್ರಯತ್ನ ನಡೆಸಿದ್ದಾರೆ. ಬಹಿರಂಗವಾಗಿ ಟೀಕಿಸಿ ಮುಜುಗರ ತರುತ್ತಿದ್ದಾರೆ. ಇಂಥವರಿಗೆ ಪರ್ಯಾಯ ಸಭೆಗಳ ಮೂಲಕ ತಿರುಗೇಟು ನೀಡಲಾಗುವುದು ಎಂದು ಹೇಳಿದ್ದಾರೆ.

ವಿಜಯೇಂದ್ರ ಅವರ ಬಗ್ಗೆ ಹುನ್ನಾರ ನಡೆಸುತ್ತಿದ್ದವರು ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತ ಚಲಾಯಿಸಿದ್ದಾರೆ. ಇದರ ಬಗ್ಗೆ ಪಕ್ಷದ ವರಿಷ್ಠರಿಗೂ ಗೊತ್ತಿದೆ. ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಸಾಧ್ಯತೆ ಇದೆ. ತಪ್ಪು ಮಾಡಿದವರನ್ನು ಬಿಟ್ಟು ವಿಜಯೇಂದ್ರ ಅವರನ್ನು ಗುರಿ ಮಾಡುವುದು ಸರಿಯಲ್ಲ. ನಾನು ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಮೌನವ್ರತ ತಾಳಿದ್ದು, ವಿಜಯೇಂದ್ರ ವಿರುದ್ಧ ಷಡ್ಯಂತ್ರ ಮುಂದುವರೆದಲ್ಲಿ ಮೌನವ್ರತ ಮುರಿಯುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಡಿಯೂರಪ್ಪ ಪುತ್ರ ಎನ್ನುವ ಏಕೈಕ ಕಾರಣಕ್ಕೆ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ. ಅವರ ಶಕ್ತಿ, ಸಾಮರ್ಥ್ಯವನ್ನು ಗಮನಿಸಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. ಅವರು ಅಧ್ಯಕ್ಷರಾದ ನಂತರ ಪಕ್ಷ ಸಂಘಟನೆ ಬಲವಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular