ಬೆಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಎಆರ್ ಕಾನ್ಸ್ ಟೇಬಲ್ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.
ಹನುಮಂತ ಪಡೋಲ್ಕರ್ ಮೃತ ಕಾನ್ಸ್ ಟೇಬಲ್. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದ ಹನುಮಂತ ಪಡೋಲ್ಕರ್ ಬೆಂಗಳೂರಿನಲ್ಲಿ ಡಿಎಆರ್‌ನಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕೆಲ ದಿನಗಳ ಹಿಂದೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಅವರ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.