ಬಾಂಗ್ಲಾದೇಶದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್

ಬಾಂಗ್ಲಾದೇಶದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಹಾರಾಷ್ಟ್ರದ ಕಾನ್ಸ್ ಟೇಬಲ್ ನನ್ನ ಅಮಾನತು ಮಾಡಲಾಗಿದೆ. ಅತ್ಯಾಚಾರ ಆರೋಪದಡಿ‌ ಇತ್ತೀಚೆಗೆ ಬಂಧಿಸಲಾದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಪೊಲೀಸ್ ಪಡೆಯ ಕಾನ್ಸ್ ಟೇಬಲ್ ಅವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸಾಂಗ್ಲಿಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಡಿ ಆತನನ್ನು ಬಂಧಿಸಲಾಗಿತ್ತು. ಬಂಧನದ ನಂತರ ಸ್ಥಳೀಯ ನ್ಯಾಯಾಲಯವು ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತು.

ಸಾಂಗ್ಲಿಯಲ್ಲಿ ಮಹಿಳೆಯೊಂದಿಗೆ ವಾಸಿಸುತ್ತಿದ್ದ ಬಾಂಗ್ಲಾದೇಶದ 17 ವರ್ಷದ ಸಂತ್ರಸ್ತೆಯ ಮೇಲೆ ಕಾನ್ಸ್ ಟೇಬಲ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಪೊಲೀಸ್ ದಾಳಿ ಮಾಡೋದಾಗಿ ಎಚ್ಚರಿಕೆ ನೀಡಿದ ಆರೋಪಿತ ಕಾನ್ಸ್ ಟೇಬಲ್ ಸಂತ್ರಸ್ತೆಯಿಂದ 2 ಲಕ್ಷ ರೂಪಾಯಿ ಮತ್ತು ಬಾಲಕಿಗೆ ಆಶ್ರಯ ನೀಡುತ್ತಿದ್ದ ಮಹಿಳೆಯಿಂದ 5 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡಿರೋ ಆರೋಪವಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read