HomeKarnatakaಬೆಂಗಳೂರಿನಲ್ಲಿ ಇಂದು, ನಾಳೆ ಸಂವಿಧಾನ ಏಕತಾ ಸಮಾವೇಶ: ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಸೇರಿ ಹಲವು...

ಬೆಂಗಳೂರಿನಲ್ಲಿ ಇಂದು, ನಾಳೆ ಸಂವಿಧಾನ ಏಕತಾ ಸಮಾವೇಶ: ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಸೇರಿ ಹಲವು ಗಣ್ಯರು ಭಾಗಿ

ಬೆಂಗಳೂರು: ಸಂವಿಧಾನ ರಚನೆಯಾಗಿ 75 ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಫೆಬ್ರವರಿ 24, 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ ಹಮ್ಮಿಕೊಂಡಿದೆ.

ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ಪಕ್ಷಗಳ ರಾಷ್ಟ್ರೀಯ ನಾಯಕರು, ಕೇಂದ್ರ ಸಚಿವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಫೆಬ್ರವರಿ 24ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular