HomeIndiaBIG NEWS: ನಿರ್ಮಾಣ ಹಂತದ ಕಟ್ಟಡ ಕುಸಿತ; ಮಗು ಸೇರಿ ಇಬ್ಬರು ದುರ್ಮರಣ

BIG NEWS: ನಿರ್ಮಾಣ ಹಂತದ ಕಟ್ಟಡ ಕುಸಿತ; ಮಗು ಸೇರಿ ಇಬ್ಬರು ದುರ್ಮರಣ

ಲಖನೌ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮಗು ಸೇರಿ ಇಬ್ಬರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.

ನಿರ್ಮಾಣ ಹಂತದ ಕಟ್ಟಡದ ನೆಲಮಾಳಿಗೆ ಕುಸಿದು ಈ ದುರಂತ ಸಂಭವಿಸಿದೆ. ಎರಡು ತಿಂಗಳ ಮಗು ಹಾಗೂ ಇನ್ನೋರ್ವ ಸಾವನ್ನಪ್ಪಿದ್ದಾರೆ. ಎರಡು ತಿಂಗಳ ಐಶಾ ಹಾಗೂ ಕಾರ್ಮಿಕ ಮುಕದಮ್ (30) ಮೃತರು. ಘಟನೆಯಲ್ಲಿ 14 ಕಾರ್ಮಿಕರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಟ್ಟಡ ನಿರ್ಮಾಣ ಮಾಡುತ್ತಿದ್ದ ಕಾರ್ಮಿಕರು ನೆಲ ಮಾಳಿಗೆಯಲ್ಲಿ ವಾಸವಾಗಿದ್ದರು. ಮಹಡಿ ಕುಸಿದಿದ್ದರಿಂದ ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸೈಯದ್ ಅಲಿ ಅಬ್ಬಾಸ್ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular