HomeLatest NewsBUDGET BREAKING : ಬೆಂಗಳೂರಲ್ಲಿ 2ನೇ 'ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ' ನಿರ್ಮಾಣ : CM ಸಿದ್ದರಾಮಯ್ಯ...

BUDGET BREAKING : ಬೆಂಗಳೂರಲ್ಲಿ 2ನೇ ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6, 2026) ಮಂಡಿಸಿರುವ ರಾಜ್ಯ ಬಜೆಟ್ನಲ್ಲಿ ಕರ್ನಾಟಕದ ವೈಮಾನಿಕ ಕ್ಷೇತ್ರಕ್ಕೆ (Aviation Sector) ಹೊಸ ವೇಗ ನೀಡುವ ಹಲವು ಬೃಹತ್ ಯೋಜನೆಗಳನ್ನು ಘೋಷಿಸಿದ್ದಾರೆ.

ಹೌದು. ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್ ಪ್ರಮುಖ ಘೋಷಣೆಗಳು
2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಸಲಹೆ ಮತ್ತು ಅಭಿಪ್ರಾಯ ಪಡೆದು, ಶೀಘ್ರದಲ್ಲೇ ಕಾರ್ಯ ಸಾಧ್ಯತಾ ವರದಿ (Feasibility Report) ಸಿದ್ಧಪಡಿಸಲಾಗುವುದು.
ರಾಜ್ಯದ 7 ದೇಶಿಯ ವಿಮಾನ ನಿಲ್ದಾಣಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಒಟ್ಟು 1,593 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾರ್ಷಿಕ ಅನುದಾನ: ಪ್ರಸಕ್ತ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಆಧುನೀಕರಣ ಮತ್ತು ಸೌಲಭ್ಯಗಳ ಹೆಚ್ಚಳಕ್ಕಾಗಿ 200 ಕೋಟಿ ರೂ. ವಿಶೇಷ ಅನುದಾನ ನೀಡಲಾಗಿದೆ.

ಫ್ಲೈಟ್ ಟ್ರೈನಿಂಗ್ ಸ್ಕೂಲ್: ರಾಜ್ಯದ ಯುವಕರಿಗೆ ಪೈಲಟ್ ತರಬೇತಿ ನೀಡಲು ವಿಜಯಪುರ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಗಳಲ್ಲಿ ಅತ್ಯಾಧುನಿಕ ‘ಫ್ಲೈಟ್ ಟ್ರೈನಿಂಗ್ ಸ್ಕೂಲ್’ (Flight Training School) ಆರಂಭಿಸಲಾಗುವುದು.
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಯಾಗುವುದರಿಂದ ನಗರದ ಆರ್ಥಿಕತೆಗೆ ಮತ್ತಷ್ಟು ಬಲ ಸಿಗಲಿದೆ. ಅಲ್ಲದೆ, ವಿಜಯಪುರ ಮತ್ತು ಶಿವಮೊಗ್ಗದಲ್ಲಿ ತರಬೇತಿ ಶಾಲೆ ಆರಂಭಿಸುವುದರಿಂದ ಕನ್ನಡಿಗರಿಗೆ ವಿಮಾನಯಾನ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular