HomeKarnatakaಹುಲಿ ಸಂರಕ್ಷಿತ ಪ್ರದೇಶ, ಆನೆ ಕಾರಿಡಾರ್ ಬಫರ್ ವಲಯದಲ್ಲಿ ಲೇಔಟ್ ನಿರ್ಮಾಣ: ಸರ್ಕಾರದಿಂದ ಕಠಿಣ ಕ್ರಮ

ಹುಲಿ ಸಂರಕ್ಷಿತ ಪ್ರದೇಶ, ಆನೆ ಕಾರಿಡಾರ್ ಬಫರ್ ವಲಯದಲ್ಲಿ ಲೇಔಟ್ ನಿರ್ಮಾಣ: ಸರ್ಕಾರದಿಂದ ಕಠಿಣ ಕ್ರಮ

ಚಿಕ್ಕಮಗಳೂರು: ಹುಲಿ ಸಂರಕ್ಷಿತ ಪ್ರದೇಶ, ಆನೆ ಕಾರಿಡಾರ್ ಬಫರ್ ವಲಯದಲ್ಲಿ ಲೇಔಟ್ ನಿರ್ಮಾಣ ಮಾಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ತರೀಕೆರೆಯಲ್ಲಿ ಮಾತನಾಡಿದ ಅವರು, ಬಫರ್ ವಲಯದಲ್ಲಿ ಲೇಔಟ್ ನಿರ್ಮಾಣ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಜಿಲ್ಲಾಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ. ಅವರು ನೋಟಿಸ್ ನೀಡಿದ್ದು, ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಹುಲಿ ಸಂರಕ್ಷಿತ ಪ್ರದೇಶ ಮಾತ್ರವಲ್ಲದೇ ಭೂ ಸುಧಾರಣೆ ಕಾಯ್ದೆಯನ್ನು ಕೂಡ ಉಲ್ಲಂಘಿಸಲಾಗಿದ್ದು, ಕಂದಾಯ ಮತ್ತು ಅರಣ್ಯ ಸಚಿವರ ಜೊತೆಗೆ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಪರಿಸರ ಹಾನಿಗೆ ಅವಕಾಶ ನೀಡುವುದಿಲ್ಲ. ಹುಲಿ ಸಂರಕ್ಷಿತ ಪ್ರದೇಶ ಮತ್ತು ಆನೆ ಕಾರಿಡಾರ್ ಬಫರ್ ವಲಯದಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular