HomeKarnatakaಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದವರಿಗೆ ಶಾಕ್: 2.48 ಲಕ್ಷ ಕಾರ್ಡ್ ರದ್ದು ಮಾಡಿದ ಕಾರ್ಮಿಕ...

ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದವರಿಗೆ ಶಾಕ್: 2.48 ಲಕ್ಷ ಕಾರ್ಡ್ ರದ್ದು ಮಾಡಿದ ಕಾರ್ಮಿಕ ಕಲ್ಯಾಣ ಮಂಡಳಿ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವಿಶೇಷ ಕಾರ್ಯಾಚರಣೆ ನಡೆಸಿ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡಿದ್ದ 2.48 ಲಕ್ಷ ಕಾರ್ಮಿಕರ ಕಾರ್ಡುಗಳನ್ನು ರದ್ದು ಮಾಡಿದೆ.

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 18.49 ಲಕ್ಷ ಮಹಿಳೆಯರು, 27.83 ಲಕ್ಷ ಪುರುಷರು ಸೇರಿ 46.42 ಲಕ್ಷ ಕಾರ್ಮಿಕರು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಂಡಿದ್ದಾರೆ. ಇವರಲ್ಲಿ 2.48 ಲಕ್ಷ ನಕಲಿ ಕಾರ್ಮಿಕರ ಕಾರ್ಡುಗಳನ್ನು ರದ್ದು ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ 1,69,180 ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಬೀದರ್ ಜಿಲ್ಲೆಯಲ್ಲಿ 25,000, ಶಿವಮೊಗ್ಗದಲ್ಲಿ 6,900, ಉತ್ತರ ಕನ್ನಡ 4155 ಸೇರಿದಂತೆ 2,48,987 ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಕಲಿ ಕಾರ್ಡ್ ಗಳು ಪತ್ತೆಯಾಗಿವೆ. ದಾಖಲಾತಿಗಳ ಪರಿಶೀಲನೆ ನಡೆಸಿ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾವಿರಾರು ಮಂದಿ ಸುಳ್ಳು ದಾಖಲೆ ಸೃಷ್ಟಿಸಿ ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಸ್ಮಾರ್ಟ್ ಕಾರ್ಡ್ ಪಡೆದುಕೊಂಡಿರುವುದು ಬಹಿರಂಗವಾಗಿದೆ. ಸೌಲಭ್ಯ ಪಡೆದುಕೊಳ್ಳಲು ಈ ರೀತಿ ಮಾಡಲಾಗಿದ್ದು, ಪತ್ತೆ ಹಚ್ಚಿದ ಕಾರ್ಮಿಕ ಮಂಡಳಿ ಕಾರ್ಡ್ ಗಳನ್ನು ರದ್ದು ಮಾಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular