HomeKarnatakaಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ.

ಜೆಜೆಎಂ ಯೋಜನೆಯ ಕಾಮಗಾರಿ ಪೈಪ್ ಒಡೆದು ಈ ಘಟನೆ ನಡೆದಿದೆ. ಮನೆಗಳಿಗೆ ಪೂರೈಸುವ ನೀರಿಗೆ ಕಲುಷಿತ ನೀರು ಸೇರ್ಪಡೆಯಾಗಿದೆ. ಇದರಿಂದ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ.

ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular