
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ನೀರು ಸರಬರಾಜು ಸಹಾಯಕ ಸಿ. ಹೆಚ್ ಪ್ರಕಾಶ್ ಬಾಬು ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿಯಲ್ಲಿ ನಗರಸಭೆಯಿಂದ ಪೂರೈಕೆಯಾಗುವ ಕಲುಷಿತ ನೀರು ಸೇವಿಸಿ 100 ಕ್ಕೂ ಹೆಚ್ಚು ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥರಾದ ಕೆಲವರನ್ನು ಪ್ರಸ್ತುತ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಪಕ್ಕದ ದಾವಣಗೆರೆ ನಗರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

