BIG NEWS: ಕಲುಷಿತ ನೀರು ಸೇವಿಸಿ 7 ಜನ ಅಸ್ವಸ್ಥ: ಓರ್ವ ಮಹಿಳೆ ಸಾವು; ಪಿಡಿಒ ಸಸ್ಪೆಂಡ್

ದಾವಣಗೆರೆ: ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿದ ದಿನಕ್ಕೆ ಹೆಚ್ಚುತ್ತಿದೆ. ಕಲುಷಿತ ನೀರು ಸೇವಿಸಿ 7 ಜನರು ತೀವ್ರ ಅಸ್ವಸ್ಥಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ.

ಕಳೆದ ನಾಲ್ಕೈದು ದಿನಗಳ ಹಿಂದೆ ಗ್ರಾಮದ 7 ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದರು. ಈ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಪಿಡಿಒ ಓರ್ವರನ್ನು ಅಮಾನತು ಮಾಡಲಾಗಿದೆ.

ಹುಣಸಘಟ್ಟ ಪಿಡಿಒ ಪರಮೇಶ್ ಕಳ್ಳೂರು ಅಮಾನತುಗೊಂಡವರು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ್ ಆರೋಪದಲ್ಲಿ ಪರಮೇಶ್ ಅವರನ್ನು ಅಮಾನತು ಮಾಡಲಾಗಿದೆ.

ಕುಡಿಯುವ ನೀರಿನ ಪೈಪ್ ಲೈನ್ ನಲ್ಲಿ ಚರಂಡು ನೀರು ಸೇರಿಕೊಳ್ಳುತ್ತಿದ್ದರೂ ಪಿಡಿಒ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಬಿ ಇಟ್ನಾಳ್ ಪಿಡಿಒ ಪರಮೇಶ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read