HomeKarnatakaಮೆಕ್ಯಾನಿಕ್ ಗಳ ಅವಹೇಳನ: ಖಾಸಗಿ ವಾಹಿನಿ ಟಿವಿ ಶೋ ವಿರುದ್ಧ ದೂರು ದಾಖಲು

ಮೆಕ್ಯಾನಿಕ್ ಗಳ ಅವಹೇಳನ: ಖಾಸಗಿ ವಾಹಿನಿ ಟಿವಿ ಶೋ ವಿರುದ್ಧ ದೂರು ದಾಖಲು

ತುಮಕೂರು: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಮೆಕ್ಯಾನಿಕ್ ಗಳಿಗೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ.

ಖ್ಯಾತ ನಟ, ನಟಿಯರು ತೀರ್ಪುಗಾರರಾಗಿರುವ ಜನಪ್ರಿಯ ರಿಯಾಲಿಟಿ ಶೋನರಲ್ಲಿ ಮೆಕ್ಯಾನಿಕ್ ನನ್ನು ಮದುವೆಯಾಗಿ ಗ್ರೀಸ್ ತಿಂದುಕೊಂಡು ಬದುಕಲಾಗದು ಎಂದು ಹೇಳುವ ಮಾತು ಇದೆ. ಇದರಿಂದ ಇಡೀ ಮೆಕ್ಯಾನಿಕ್ ಸಮುದಾಯಕ್ಕೆ ನೋವಾಗಿದೆ ಎಂದು ಚಿಕ್ಕನಾಯಕನಹಳ್ಳಿ ಪಟ್ಟಣದ ಕೆಲ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ ಅವರಿಗೆ ಸಂಘದ ಪದಾಧಿಕಾರಿಗಳು ದೂರು ನೀಡಿದ್ದಾರೆ. ರಿಯಾಲಿಟಿ ಶೋ ನಲ್ಲಿ ಮೆಕಾನಿಕ್ ಅವಹೇಳನ ಮಾಡಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular