ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೊಯಿಡಾ, ದಾಂಡೇಲಿ, ಯಲ್ಲಾಪುರ ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.
ಕಳಸ ತಾಲೂಕು
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಕಳಸ ತಾಲೂಕಿನ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಕಳಸ ತಹಶೀಲ್ದಾರ್ ಮಂಜುನಾಥ್ ರಜೆ ಘೋಷಣೆ ಮಾಡಿದ್ದಾರೆ.

