HomeLatest Newsಮುಂದುವರೆದ ಮಳೆ ಆರ್ಭಟ: ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಮುಂದುವರೆದ ಮಳೆ ಆರ್ಭಟ: ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಶನಿವಾರ ವಿವಿಧೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಜುಲೈ 5 ರಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಮಳೆ ಆರ್ಭಟ ಮುಂದುವರೆದಿದ್ದು, ಸಾಗರ, ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢಶಾಲೆಗಳಿಗೆ ದಿನಾಂಕ:05.07.2025ರ ಶನಿವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular