HomeLatest NewsGOOD NEWS : ರೈತರಿಗೆ ಹಗಲಿನಲ್ಲೇ 5 ಗಂಟೆ ನಿರಂತರ 3 ಫೇಸ್ ವಿದ್ಯುತ್ ಪೂರೈಕೆ...

GOOD NEWS : ರೈತರಿಗೆ ಹಗಲಿನಲ್ಲೇ 5 ಗಂಟೆ ನಿರಂತರ 3 ಫೇಸ್ ವಿದ್ಯುತ್ ಪೂರೈಕೆ : CM ಸಿದ್ದರಾಮಯ್ಯ ಘೋಷಣೆ

ಚಿಕ್ಕಬಳ್ಳಾಪುರ : ರೈತರಿಗೆ ಹಗಲಿನಲ್ಲೇ 5 ಗಂಟೆ ನಿರಂತರ 3 ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು.

ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ. ಇಂದು ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ.ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ.ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ.ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ.
ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ.

ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular