HomeLatest NewsBREAKING : ಚಿಕ್ಕಮಗಳೂರಲ್ಲಿ ಹಿಂದೂಗಳ ಮನೆ ಮೇಲೆ ನಿರಂತರ ಕಲ್ಲು ತೂರಾಟ : ಇಬ್ಬರು ಪೊಲೀಸ್...

BREAKING : ಚಿಕ್ಕಮಗಳೂರಲ್ಲಿ ಹಿಂದೂಗಳ ಮನೆ ಮೇಲೆ ನಿರಂತರ ಕಲ್ಲು ತೂರಾಟ : ಇಬ್ಬರು ಪೊಲೀಸ್ ವಶಕ್ಕೆ.!


ಚಿಕ್ಕಮಗಳೂರು : ನಗರದ ವಿಜಯನಗರ ಬಡಾವಣೆ ತಿಲಕ್ ಪಾರ್ಕ್ ನಲ್ಲಿ ಕಳೆದ ಒಂದು ವಾರದಿಂದ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ನಿರಂತರವಾಗಿ ಕಲ್ಲು ತೂರಾಟ ನಡೆಸುತ್ತಿರುವ ಘಟನೆ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನ್ಯಕೋಮಿನ ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ವಿವರ
ಕಳೆದ ಏಳು ದಿನಗಳಿಂದ ವಿಜಯನಗರ ಬಡಾವಣೆಯ ನಿವಾಸಿಗಳು ಅಪರಿಚಿತರಿಂದ ಕಲ್ಲು ತೂರಾಟದ ಭೀತಿಯಲ್ಲಿದ್ದರು. ಕಿಡಿಗೇಡಿಗಳು ರಾತ್ರಿ ವೇಳೆ ಮನೆಗಳ ಮೇಲೆ ಕಲ್ಲು ಎಸೆಯುತ್ತಿದ್ದುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು. ನಂತರ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಇಬ್ಬರು ಯುವಕರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಕ್ಷದ್ ಮತ್ತು ಹುಸೇನ್ ಎಂಬ ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.ಸುಧಾ ಎಂಬುವವರ ಮನೆ ಮೇಲೆ ನಿರಂತರವಾಗಿ ಕಲ್ಲು ತೂರಾಟ ನಡೆಸಲಾಗುತ್ತಿತ್ತು, ಈ ಸಂಬಂಧ ಸುಧಾ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಜರಂಗದಳದ ಕಾರ್ಯಕರ್ತರು ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಲ್ಲೆ ಆರೋಪ ಮತ್ತು ಆಸ್ಪತ್ರೆಗೆ ದಾಖಲು
ಆರೋಪಿಗಳನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಅಥವಾ ಘಟನೆಯ ಹಿನ್ನೆಲೆಯಲ್ಲಿ ಬಜರಂಗದಳದ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಗಳು ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿದ್ದಾರೆನ್ನಲಾದ ಅಕ್ಷದ್ ಮತ್ತು ಹುಸೇನ್ ಸದ್ಯ ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಡಾವಣೆಯಲ್ಲಿ ಶಾಂತಿ ಕದಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಬಡಾವಣೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಾಂದರ್ಭಿಕ ಚಿತ್ರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular