HomeLatest Newsಹೊರ ಗುತ್ತಿಗೆ ನೌಕರರ ವೇತನ; ಸರ್ಕಾರ ಹೇಳುವುದೇನು?

ಹೊರ ಗುತ್ತಿಗೆ ನೌಕರರ ವೇತನ; ಸರ್ಕಾರ ಹೇಳುವುದೇನು?

ಕರ್ನಾಟಕದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದೆ. ನೇರ ನೇಮಕಾತಿ ಮಾಡಿಕೊಳ್ಳುವ ಬದಲು ಸರ್ಕಾರ ಹೊರ ಗುತ್ತಿಗೆ ಆಧಾರದ ಮೇಲೆ ನೌಕರರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿಕೊಳ್ಳುತ್ತದೆ.

ಆದರೆ ಈ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಹಿಸುತ್ತಿರುವವರ ನೌಕರರು/ ಕಾರ್ಮಿಕರ ವೇತನ ದೃಢೀಕರಣವನ್ನು ಆಯಾ ಸದರಿಯವರಿಗೆ ತಲುಪುತ್ತಿರುವ ಬಗ್ಗೆ ಸರ್ಕಾರ/ ಇಲಾಖೆ/ ಸಂಸ್ಥೆಗಳ ಮೂಲ ಮಾಲೀಕರು ಹಾಗೂ ಗುತ್ತಿಗೆದಾರರು ಯಾವ ರೀತಿಯಲ್ಲಿ ಧೃಢಪಡಿಸಿಕೊಳ್ಳುತ್ತಿದೆ?  ಎಂದು ಸರ್ಕಾರವನ್ನು ಪ್ರಶ್ನೆ ಮಾಡಲಾಗಿತ್ತು.

ಸರ್ಕಾರ ಈ ಕುರಿತು ಉತ್ತರವನ್ನು ನೀಡಿದ್ದು, ಕಾರ್ಮಿಕ ಇಲಾಖೆಗೆ, ಇಲಾಖೆಯ ಅನುಷ್ಠಾನಗೊಳಿಸುತ್ತಿರುವ ಕನಿಷ್ಠ ವೇತನ ಕಾಯ್ದೆ, 1948, ವೇತನ ಪಾವತಿ ಕಾಯ್ದೆ, 1936, ಗುತ್ತಿಗೆ ಕಾರ್ಮಿಕ ಕಾಯ್ದೆ, 1970, ಉಪಧನ ಪಾವತಿ ಕಾಯ್ದೆ, 1972, ಹೆರಿಗೆ ಭತ್ಯೆ ಕಾಯ್ದೆ 1961 ಹಾಗೂ ಅನ್ವಯಿಸುವ ಇತರ ಕಾರ್ಮಿಕ ಕಾಯ್ದೆಗಳನ್ವಯ ನಿರ್ದಿಷ್ಟ ದೂರುಗಳು ಬಂದಲ್ಲಿ ಸರ್ಕಾರದಿಂದ ಸದರಿ ಕಾಯ್ದೆಗಳಡಿ ಅಧಿಸೂಚಿಸಲ್ಪಟ್ಟ ಕಾರ್ಯವ್ಯಾಪ್ತಿಯ ನಿರೀಕ್ಷಕರು/ ಅಧಿಕಾರಿಗಳು ತಪಾಸಣೆ ನಡೆಸುವ ಮೂಲಕ/ ಕಾಲಕಾಲಕ್ಕೆ ತಪಾಸಣೆ ಮಾಡಲಾಗುತ್ತದೆ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಈ ತಪಾಸಣೆ ನಡೆಸುವ ಸಂದರ್ಭದಲ್ಲಿ ಕಾರ್ಮಿಕರ ಹೇಳಿಕೆ ಹಾಗೂ ವೇತನ ಪಾವತಿ ಮಾಡಿದ ದಾಖಲೆಗಳನ್ನು ಪರಿಶೀಲಿಸಿ ವೇತನ ಪಾವತಿಯಾದ ಬಗ್ಗೆ ದೃಢೀಕರಿಸಲಾಗುತ್ತದೆ. ನಿಗದಿತ ವೇತನಕ್ಕಿಂತ ಕಡಿಮೆ ವೇತನ ನೀಡುವುದು ಹಾಗೂ ನಿಗದಿತ ಸಮಯಕ್ಕೆ ವೇತನ ನೀಡದಿದ್ದ ಪಕ್ಷದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ವಿವರಣೆ ನೀಡಿದೆ.

ಸರ್ಕಾರದ ಮಾಹಿತಿ ಪ್ರಕಾರ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಒಟ್ಟು ಹೊರ ಗುತ್ತಿಗೆ ನೌಕರರ ಸಂಖ್ಯೆ 96,844 ಆಗಿದೆ. ಇವರಲ್ಲಿ ಕೃಷಿ ಇಲಾಖೆಯಲ್ಲಿ 15,824, ಪಶುಸಂಗೋಪನೆ ಇಲಾಖೆಯಲ್ಲಿ 15,376, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 11,424 ಅತಿ ಹೆಚ್ಚು ನೌಕರರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಕಳೆದ ವಾರ ಮೊಹಮ್ಮದ್ ಮೊಹಸಿನ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಾರ್ಮಿಕ ಇಲಾಖೆ ಪತ್ರವೊಂದನ್ನು ಬರೆದಿದ್ದಾರೆ. ಸರ್ಕಾರದ ವಿವಿಧ ಇಲಾಖೆ/ ನಿಗಮ/ ಮಂಡಳಿ/ ಸಂಸ್ಥೆಗಳಲ್ಲಿ ಖಾಯಂ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡದೆ ಇರುವುದರಿಂದ ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಸಗಿ ಏಜೆನ್ಸಿಗಳ ಮೂಲಕ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ಸದರಿ ಏಜೆನ್ಸಿಗಳು ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಯವೇತನ, ESI, PF ಮೊತ್ತಗಳನ್ನು ನಿಗದಿತ ಅವಧಿಯಲ್ಲಿ ಪಾವತಿಸದಿರುವ ಬಗ್ಗೆ, ದೂರುಗಳು ಸ್ವೀಕೃತವಾದ ಮತ್ತು ಅವರಿಗೆ ಹುದ್ದೆಗೆ ಅವಶ್ಯವಿರುವ ಕೌಶಲ್ಯ ತರಬೇತಿಗಳನ್ನು ನೀಡದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ 2008ರಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘ (ನಿಯಮಿತ) ಎಂಬ ಸಹಕಾರ ಸಂಘದ ಮಾದರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸಹಕಾರ ಸಂಘಗಳನ್ನು ಸಚಿವ ಸಂಪುಟದ ಅನುಮೋದನೆ ಪಡೆದು ಸ್ಥಾಪಿಸಲು ಉದ್ದೇಶಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಸದರಿ ಪ್ರಸ್ತಾವನೆ ಸಂಬಂಧ ರಚಿತವಾದ ಉಪ ಸಮಿತಿಯ ಶಿಫಾರಸ್ಸುಗಳೊಂದಿಗೆ ದಿನಾಂಕ 27.11.2025ರಂದು ನಡೆದ ಸಚಿವ ಸಂಪುಟ ಸಭೆಯ ಮುಂದ ಅನುಮೋದನೆಗೆ ಸಲ್ಲಿಸಿದ ಸಂದರ್ಭದಲ್ಲಿ ಮಾನ್ಯ ಸಚಿವ ಸಂಪುಟವು ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿ ಇಲಾಖೆಗಳ ಅಭಿಪ್ರಾಯ ಪಡೆದು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದೆ.

ರಾಜ್ಯಾದ್ಯಂತ ಬೀದರ್ ಜಿಲ್ಲಾ ಸಹಕಾರ ಸಂಘದ ಮಾದರಿಯಲ್ಲಿ ಸ್ಥಾಪಿಸುವ ಸಂಬಂಧ ಮತ್ತು ಸದರಿ ಸಹಕಾರ ಸಂಘದ ಮೂಲಕ ಹೊರಗುತ್ತಿಗೆ ನೌಕರರ ಸೇವೆಯನ್ನು ಸರ್ಕಾರಿ ಸ್ವಾಮ್ಯದ ಕಛೇರಿ/ ನಿಗಮ/ ಮಂಡಳಿಗಳಿಗೆ ಒದಗಿಸುವ ಕುರಿತಂತೆ ತಮ್ಮ ಅಮೂಲ್ಯ ಸಲಹೆ/ ಅಭಿಪ್ರಾಯವನ್ನು 15 ದಿನಗಳೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

15 ದಿನಗಳೊಳಗಾಗಿ ತಮ್ಮ ಸಲಹೆ/ ಅಭಿಪ್ರಾಯವನ್ನು ಸಲ್ಲಿಸದಿದ್ದಲ್ಲಿ ತಮ್ಮ ಸಹಮತಿ ಇದೆಯೆಂದು ಭಾವಿಸಲಾಗುತ್ತದೆ ಎಂದು ಈ ಮೂಲಕ ತಮಗೆ ತಿಳಿಸಬಯಸುತ್ತೇನೆ ಎಂದು ಪತ್ರದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular