HomeKarnatakaವಸತಿ ಶಾಲೆಗಳಲ್ಲಿ ಗುತ್ತಿಗೆ ಶಿಕ್ಷಕರಿಗೆ ಶೇ. 5 ಕೃಪಾಂಕ: 12 ವರ್ಷಗಳ ಹೋರಾಟ ತಾರ್ಕಿಕ ಅಂತ್ಯ;...

ವಸತಿ ಶಾಲೆಗಳಲ್ಲಿ ಗುತ್ತಿಗೆ ಶಿಕ್ಷಕರಿಗೆ ಶೇ. 5 ಕೃಪಾಂಕ: 12 ವರ್ಷಗಳ ಹೋರಾಟ ತಾರ್ಕಿಕ ಅಂತ್ಯ; ಸೇವೆ ಕಾಯಂ ಕನಸು ಹೊತ್ತ ಸಾವಿರಾರು ಶಿಕ್ಷಕರಿಗೆ ಅನುಕೂಲ

ಬೆಂಗಳೂರು: ವಸತಿ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂಕ ನೀಡಲು ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ವಿಭಾಗೀಯಪೀಠ ಎತ್ತಿ ಹಿಡಿದಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂತ ನೀಡಲು ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ ಆದೇಶವನ್ನು ವಿಭಾಗಿಯಪೀಠ ಎತ್ತಿ ಹಿಡಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಕಳೆದ 12 ವರ್ಷಗಳಿಂದ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದ ಹಲವು ಸುತ್ತಿನ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಂಡಂತಾಗಿದೆ. ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಸಾವಿರಾರು ಶಿಕ್ಷಕರಿಗೆ ಅನುಕೂಲವಾಗಲಿದೆ. ಹೈಕೋರ್ಟ್ ಪೀಠದ ಆದೇಶ ಪ್ರಶ್ನಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸಲ್ಲಿಸಿದ ಮೇಲ್ಮನವಿ ಆಲಿಸಿದ ವಿಭಾಗಿಯ ಪೀಠದ ನ್ಯಾಯಮೂರ್ತಿ ಅಲೋಕ್ ಅರಾಧೆ, ನ್ಯಾಯಮೂರ್ತಿ ಎ.ಆರ್. ಹೆಗ್ಡೆ ಈ ಆದೇಶ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular