HomeLatest Newsನಾಲೆಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ನಾಲೆಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಲದಂಡೆ ನಾಲೆಗೆ ಹಾರಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ನಗರದ ಕುರುಬರಹಳ್ಳಿ ನಿವಾಸಿ ನಾಗೇಶ ರಾವ್ ಅವರ ಪುತ್ರ ಕಿರಣ್ ರಾವ್(40) ಆತ್ಮಹತ್ಯೆ ಮಾಡಿಕೊಂಡವರು. ಹಲವು ವರ್ಷಗಳಿಂದ ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ್ ರಾವ್ ನವೆಂಬರ್ 20ರಂದು ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಮೇಲ್ವಿಚಾರಣೆ ನಡೆಸಿದ್ದರು. ನಂತರ ಹುಲ್ಲಹಳ್ಳಿ ಗ್ರಾಮದ ಬಳಿ ಕಬಿನಿ ಬಲದಂಡೆ ನಾಲೆಯ ಸಮೀಪ ತಮ್ಮ ಬೈಕ್ ಮತ್ತು ಹೆಲ್ಮೆಟ್ ಬಿಟ್ಟು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದ್ದು, ನವೆಂಬರ್ 22 ರಂದು ಕಳಲೆ ಗ್ರಾಮದ ನಾಲೆಯಲ್ಲಿ ಕಿರಣ್ ರಾವ್ ಮೃತದೇಹ ಸಿಕ್ಕಿದ್ದು, ನಂಜನಗೂಡು ಗ್ರಾಮಾಂತರ ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಶವ ಹಸ್ತಾಂತರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular