HomeKarnatakaBREAKING NEWS: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗಿದ್ದ ಐವರು ಅರೆಸ್ಟ್

BREAKING NEWS: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗಿದ್ದ ಐವರು ಅರೆಸ್ಟ್

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ವಿಚಾರಣೆಗೆ ಹಾಜರಾಗಿದ್ದ ಐವರನ್ನು ಬಂಧಿಸಿದ್ದಾರೆ.

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ 8 ಜನರಿಗೆ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇಂದು ಬೀದರ್ ರೈಲ್ವೆ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಐವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ರಾಜು ಕಪನೂರ್, ನಂದಕುಮಾರ್, ಘೋರಕನಾಥ್, ರಾಮನಗೌಡ ಹಾಗೂ ಸತೀಶ್ ಬಂಧಿತರು. ಡಿ.26ರಂದು ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ನಲ್ಲಿ 8 ಜನರ ವಿರುದ್ಧ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು 8 ಜನರಿಗೆ ನೋಟಿಸ್ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular