HomeKarnatakaBREAKING : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ : ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್

BREAKING : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ : ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.ಉಡುಪಿ ಪೊಲೀಸರು ಬಿ ರಿಪೋರ್ಟ್ ಅರ್ಜಿ ಸಲ್ಲಿಸಿದ್ದರು, ಸದ್ಯ ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.

ಪ್ರಕರಣ ಸಂಬಂಧ  ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಗುತ್ತಿಗೆ ಬಿಲ್ ಪಾವತಿಗೆ ಕಮಿಷನ್ ಕೇಳಿದ್ದಾಗಿ ಆರೋಪವಿದ್ದು, ಆರೋಪ ಸಾಬೀತಾಗಿಲ್ಲವೆಂದು ಪೊಲೀಸರು ವರದಿ ಸಲ್ಲಿಸಿದ್ದರು.   ವರದಿ ಪ್ರಶ್ನಿಸಿ ಕೋರ್ಟ್ ಗೆ ಸಂತೋಷ್  ಸಹೋದರ ಪ್ರಶಾಂತ್ ಪಾಟೀಲ್ ತಕರಾರು ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಬಿ ರಿಪೋರ್ಟ್ ಅಂಗೀಕರಿಸಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳ ಹಾಜರುಪಡಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಪ್ರಕರಣದಲ್ಲಿ ಖುದ್ದು ತನಿಖಾಧಿಕಾರಿಯೇ ಸಾಕ್ಷ ಹಾಜರುಪಡಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ತನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ ಈಶ್ವರಪ್ಪ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷಾಧಾರಗಳು ಸಿಗದ ಕಾರಣ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular