HomeKarnatakaBIG NEWS: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ...

BIG NEWS: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಎಫ್ಐಆರ್ ದಾಖಲು

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ ನನ್ನು ಬಂಧಿಸುವಂತೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು.

ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular