HomeKarnatakaBIG NEWS: ನದಿಗೆ ಹಾರಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

BIG NEWS: ನದಿಗೆ ಹಾರಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

ಹಾಸನ: ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ನಡೆದಿದೆ.

ಹೊಳೆನರಸಿಪುರದ ಗುತ್ತಿಗೆದಾರ ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದವರು. ಬೇರೆಯವರಿಗೆ ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಸ್ ಬಂದಿರಲಿಲ್ಲ ಇದರಿಂದ ಸಮಸ್ಯೆಗೆ ಸಿಲುಕಿದ್ದ ಕೆ.ಸತ್ತಾರ್ ಮನನೊಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುತ್ತಿಗೆದಾರ ಹೇಮಾವತಿ ನದಿಗೆ ಹಾರಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೇಮಾವತಿ ನದಿಯಲ್ಲಿ ಸತ್ತಾರ್ ಮೃತದೇಹಕ್ಕಾಗಿ ಶೋಧ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular