ಬೆಂಗಳೂರು: ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್ಐಟಿ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗುತ್ತಿಗೆದರರ ಸಂಘದಿಂದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವರದಿಯನ್ನು ಅಂಗೀಕರಿಸಿದ ಸಚಿವ ಸಂಪುಟ, ತನಿಖೆಗೆ ಎಸ್ ಐಟಿ ರಚನೆಗೆ ಅನುಮೋದನೆ ನೀಡಿದೆ.
ಮುಖ್ಯಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಕೂಡ ಮಂಡನೆಯಾಗಿದ್ದು, ವರದಿ ಅನುಷ್ಠಾನದ ಬಗ್ಗೆ ಏ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.