HomeKarnatakaBIG NEWS: ಗುತ್ತಿಗೆದಾರರ ಸಂಘದಿಂದ 7 ಸಚಿವರಿಗೆ ಪತ್ರ: ಬಾಕಿ ಬಿಲ್ ಪಾವತಿಸದಿದ್ದರೆ ಹೋರಾಟದ ಎಚ್ಚರಿಕೆ

BIG NEWS: ಗುತ್ತಿಗೆದಾರರ ಸಂಘದಿಂದ 7 ಸಚಿವರಿಗೆ ಪತ್ರ: ಬಾಕಿ ಬಿಲ್ ಪಾವತಿಸದಿದ್ದರೆ ಹೋರಾಟದ ಎಚ್ಚರಿಕೆ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘ 7 ಸಚಿವರಿಗೆ ಪತ್ರ ಬರೆದಿದ್ದು, ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಕರ್ನಾಟಕ ಕಾಂಟ್ರ್ಯಾಕ್ಟರ್ಸ್ ಅಸೋಸಿಯೇಷನ್, 7 ಸಚಿವರಿಗೆ ಪತ್ರ ಬರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್, ಬೋಸರಾಜು, ದಿನೇಶ್ ಗುಂಡೂರಾವ್, ರಹೀಂ ಖಾನ್ ಅವರಿಗೆ ಪತ್ರ ಬರೆಯಲಾಗಿದೆ.

ಗುತ್ತಿಗೆದಾರರ ಕುಂದು-ಕೊರತೆಗಳ ಬಗ್ಗೆ ಚರ್ಚೆ ನಡೆಸಲು ಹಾಗೂ ಬಿ ಪಾವತಿ ಬಗ್ಗೆ ಮಾತುಕತೆ ನಡೆಸಲು ಸಭೆ ಕರೆದು ಅಧಿಕಾರಿಗಳ ಜೊತೆ ಚರ್ಚಿಸಲು ಅವಕಾಶ ನೀಡಿ. ಈಗಗಲೇ ಹಲವು ಬಾರಿ ಬಾಕಿ ಬಿಲ್ ಪಾವತಿ ಮಡುವಂತೆ ಮನವಿ ಮಾಡಿದರೂ ಈ ಬಗ್ಗೆ ಗಮನ ಹರಿಸಿಲ್ಲ. ಹಾಗಾಗಿ ಸಭೆ ನಡೆಸಿ ಚರ್ಚಿಸಲು ಅವಕಾಶ ಕೊಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular