BIG NEWS: ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ; ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ ಕೊಡಬೇಕಾದ ಬಾಕಿ ಬಿಲ್ ಸರ್ಕಾರ ಪಾವತಿ ಮಾಡುತ್ತಿಲ್ಲ. ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಂಪಣ್ಣ, ರಾಜ್ಯ ಸರ್ಕಾರ 25,000 ಕೋಟಿ ರೂಪಾಯಿ ಬಾಕಿ ಬಿಲ್ ಉಳಿಸಿಕೊಂಡಿದೆ. ತಕ್ಷಣ ಸರ್ಕಾರ ಬಾಕಿ ಬಿಲ್ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ಬಾಕಿಯಿದೆ. ನೀರಾವರಿ ಇಲಾಖೆಯಿಂದ 8 ಸಾವಿರ ಕೋಟಿ ರೂ. ಬಾಕಿಯಿದೆ. ಬಿಬಿಎಂಪಿಯಿಂದ 3 ಸಾವಿರ ಕೋಟಿ ರೂ. ಬಾಕಿಯಿದೆ. ಒಟ್ಟು 25 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿಯಿದೆ. ರಾಜ್ಯಸರ್ಕಾರ ಬಾಕಿ ಬಿಲ್ ಪಾವತಿಸುವವರೆಗೂ ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಬುಧವಾರ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಬಾಕಿ ಬಿಲ್ ಹಣ ಬಿಡುಗಡೆ ಮಾಡದಿದ್ದರೆ ಜನವರಿ 18ರಿಂದ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read