HomeLatest NewsBREAKING: ಬಾಕಿ ಹಣ ಪಾವತಿಗೆ ಸರ್ಕಾರಕ್ಕೆ ಡೆಡ್ ಲೈನ್: ಇಲ್ಲದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಿಗಿತಗೊಳಿಸಿ ಪ್ರತಿಭಟನೆ:...

BREAKING: ಬಾಕಿ ಹಣ ಪಾವತಿಗೆ ಸರ್ಕಾರಕ್ಕೆ ಡೆಡ್ ಲೈನ್: ಇಲ್ಲದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಿಗಿತಗೊಳಿಸಿ ಪ್ರತಿಭಟನೆ: ಗುತ್ತಿಗೆದಾರರ ಸಂಘದಿಂದ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘಟನೆ ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಿದೆ.

ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಹಣ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದು, ತಕ್ಷಣ ಬಾಕಿ ಹಣ ಬಿಡುಗಡೆ ಮಾಡುವಂತೆ ಗುತ್ತಿಗೆದಾರರ ಸಂಘಟನೆ ಆಗ್ರಹಿಸಿದೆ. ಇಲ್ಲವಾದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುತ್ತಿಗೆದಾರರ ಸಂಘಟನೆ ಅಧ್ಯಕ್ಷ, ಆರ್.ಮಂಜುನಾಥ್, ರಾಜ್ಯ ಸರ್ಕಾರ 37,370 ಕೋಟಿ ರೂ.ಬಾಕಿ ಉಳಿಸಿಕೊಂಡಿದೆ. ಕಳೆದ ಎರಡು ವರ್ಷಗಳಿಂದ ಗುತ್ತಿಗೆದಾರರು ನರಕಯಾತನೆ ಅನುಭವಿಸುತ್ತಿದ್ದೇವೆ. ಮಾರ್ಚ್ 5 ರೊಳಗೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಗಡುವು ನೀಡಿದ್ದಾರೆ.

ಅಷ್ಟರಲ್ಲಿ ಬಿಲ್ ಹಣ ಬಿಡುಗಡೆ ಮಾಡಿದರೆ ಒಳಿತು. ಇಲ್ಲವಾದಲ್ಲಿ ರಾಜ್ಯಾದ್ಯಂತ ಎಲ್ಲಾ ಇಲಾಖೆಗಳ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಆಯಾ ಇಲಾಖೆ ಬಾಳಿ ಉಳಿಸಿಕೊಂಡಿರುವ ಹಣದ ಬಗ್ಗೆ ವಿವರ ನೀಡಿದರು.

ಇಲಾಖೆಯ ಹೆಸರು – ಬಾಕಿ ಮೊತ್ತ (ಕೋಟಿ ರೂ.ಗಳಲ್ಲಿ)
ಲೋಕೋಪಯೋಗಿ ಇಲಾಖೆ (PWD) – 13,000
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) – 3,800
ಸಣ್ಣ ನೀರಾವರಿ ಇಲಾಖೆ – 3,000
ನಗರಾಭಿವೃದ್ದಿ ಇಲಾಖೆ – 2,000
ವಸತಿ ಮತ್ತು ವಕ್ಫ್ ಇಲಾಖೆ – 2,600
ಕಾರ್ಮಿಕ ಇಲಾಖೆ – 2,000
ಗಣಿ ಮತ್ತು ಭೂವಿಜ್ಞಾನ (GBA) – 2,600
ಒಟ್ಟು 37,370 ಕೋಟಿ ರೂಪಾಯಿ ಹಣ ಬಾಕಿ ಇದೆ ಎಂದರು.

10 ಮಹಾನಗರ ಪಾಲಿಕೆಗಳಲ್ಲಿ ಮತ್ತು ಕಾರ್ಮಿಕ ಇಲಾಖೆಯಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಅನ್ಯಾಯವಾಗುವಂತೆ ಪ್ಯಾಕೇಜ್ ಟೆಂಡರ್ ಮಾಡಲಾಗುತ್ತಿದೆ. ಆರ್‌ಟಿ ನಗರ ಮತ್ತು ರಾಜಾಜಿನಗರದ ಖಾಸಗಿ ಕಚೇರಿಗಳಲ್ಲಿ ಕುಳಿತು ಟೆಂಡರ್ ಹಂಚಿಕೆ ಮಾಡಲಾಗುತ್ತಿದೆ ಎಂದು ಇದೇ ವೇಳೆ ಮಂಜುನಾಥ್ ಆರೋಪಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರೆಯಾದರೂ ಅಂತಿಮವಾಗಿ ಹಣಕಾಸು ಇಲಾಖೆಯತ್ತ ಬೆರಳು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರ ಸಂಘ ಹೋರಾಟದ ನಿರ್ಧಾರ ಕೈಗೊಂಡಿದೆ ಎಂದರು.

ಮಾರ್ಚ್ 5ರೊಳಗೆ ಬಾಕಿ ಬಿಲ್ ಪಾವತಿಯಾಗಬೇಕು. ಅಷ್ಟರೊಳಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯದ ಎಲ್ಲಾ ಸರ್ಕಾರಿ ಕಾಮಗಾರಿಗಳು ಬಂದ್ ಆಗಲಿವೆ. ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರ ಗಮನಕ್ಕೆ ಈ ಸಮಸ್ಯೆಯನ್ನು ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular