ನವದೆಹಲಿ: ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತಂತೆ ಪ್ರಸ್ತಾಪಿಸಿದ್ದ ವಿವಾದಿತ ಪಠ್ಯಕ್ಕೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ(NCERT) ಕತ್ತರಿ ಹಾಕಿದೆ.
ಎಂಟನೇ ತರಗತಿಯ ಪಠ್ಯದಲ್ಲಿ ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಎನ್ನುವ ಅಧ್ಯಾಯದಲ್ಲಿ ಭ್ರಷ್ಟಾಚಾರ ಸೇರಿದಂತೆ ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಪ್ರಸ್ತಾಪಿಸಲಾಗಿತ್ತು. ನ್ಯಾಯಾಂಗದ ಬಗ್ಗೆ ಕೆಲವು ವಿವಾದಿತ ಅಂಶಗಳನ್ನು ಸೇರ್ಪಡೆ ಮಾಡಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಆರ್. ಗವಾಯಿ, ಹಾಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಅನೇಕ ನ್ಯಾಯಮೂರ್ತಿಗಳು ಈ ಕುರಿತಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜಕೀಯವಾಗಿಯೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎನ್.ಸಿ.ಇ.ಆರ್.ಟಿ. ವಿವಾದಿತ ಪಠ್ಯಕ್ಕೆ ಕತ್ತರಿ ಹಾಕಿದೆ.
ತೀವ್ರ ವಿರೋಧದ ಹಿನ್ನೆಲೆಯಲ್ಲಿ ವಿವಾದಿತ ಅಂಶಗಳನ್ನು ಹೊಂದಿದ್ದ ಈ ಪುಸ್ತಕವನ್ನು ಮಾರುಕಟ್ಟೆಯಿಂದ ಎನ್.ಸಿ.ಆರ್.ಟಿ. ಹಿಂಪಡೆದುಕೊಂಡಿದೆ. ನ್ಯಾಯಾಂಗ ವಿಷಯ ಹೊಂದಿದ ಪುಸ್ತಕ ಮಾರಾಟಕ್ಕೆ ಲಭ್ಯವಿಲ್ಲವೆಂದು ತಿಳಿಸಲಾಗಿದೆ.

