ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವ ವಿಷಯದಲ್ಲಿ ಎರಡು ಗುಂಪಿನ ನಡುವೆ ಗಲಾಟೆ ನಡೆದು ಹಲ್ಲೆಗೊಳಗಾದ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೋಹಿತ್ ನಾಯ್ಕ್, ಚಂದ್ರ ನಾಯ್ಕ್ ಆಸ್ಪತ್ರೆಗೆ ದಾಖಲಾದವರು.

ಗ್ರಾಮದ ನಾಲ್ಕು ಮನೆಗಳ ಜನ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗಿದ್ದು, ಪ್ರಾರ್ಥನೆ ಸಲ್ಲಿಸಿದ ನಂತರ ಲೋಹಿತ್ ನಾಯ್ಕ್ ಎಂಬ ಯುವಕನನ್ನು ಕರೆಸಿ ಹಣ ಉದ್ಯೋಗದ ಭರವಸೆ ನೀಡಿ ಮತಾಂತರಕ್ಕೆ ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಹಲ್ಲೆ ನಡೆಸಿದ್ದಾರೆ. ಜಗಳ ಬಿಡಿಸಲು ಹೋದ ಚಂದ್ರ ನಾಯ್ಕನ ಮೇಲೆಯೂ ಹಲ್ಲೆ ಮಾಡಲಾಗಿದೆ.

ಈ ವಿಚಾರ ತಿಳಿದು ಎರಡು ಗುಂಪಿನ ನಡುವೆ ಗಲಾಟೆ ನಡೆದಿದೆ. ಗ್ರಾಮದಲ್ಲಿ ಮತಾಂತರಕ್ಕೆ ಕುಮ್ಮಕ್ಕು ನೀಡುತ್ತಿರುವ ಸುರೇಶ್ ಎಂಬುವನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಶಿಕಾರಿಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read