ಕೋರ್ಟ್ ಶಿಕ್ಷೆ ವಿಧಿಸುತ್ತಿದ್ದಂತೆ ಕೊನೆಯುಸಿರೆಳೆದ ಅಪರಾಧಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 5 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬರು ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ರಾಮಣ್ಣ ಭೋವಿ(30) ಮೃತಪಟ್ಟವರು. 2014ರಲ್ಲಿ ನಡೆದ ಜಾತಿ ಸಂಘರ್ಷ, ಗಲಭೆ ಪ್ರಕರಣದಲ್ಲಿ ರಾಮಣ್ಣ ಭೋವಿ ಸೇರಿ 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಮೂವರು ಅಪರಾಧಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಕೊಪ್ಪಳ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ.

ಈ ತೀರ್ಪಿನ ವಿವರ ಹೊರ ಬೀಳುತ್ತಿದ್ದಂತೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ರಾಮಣ್ಣ ಭೋವಿ ಅಸ್ವಸ್ಥರಾಗಿದ್ದಾರೆ. ಪೊಲೀಸರು ಮತ್ತು ಜೈಲಿನ ಅಧಿಕಾರಿಗಳು ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾಮಣ್ಣ ಅಮೃತಪಟ್ಟಿದ್ದಾರೆ.

111 ಆರೋಪಿಗಳ ಪೈಕಿ 10 ಮಂದಿ ಕಳೆದ 9 ವರ್ಷದಲ್ಲಿ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ಜಾತಿ ಸಂಘರ್ಷ ಗಲಭೆ ಹಾಗೂ ಅಸ್ಪೃಶ್ಯತೆಗೆ ಸಂಬಂಧಿಸಿದಂತೆ ದೂರು ಕೊಟ್ಟಿದ್ದ ಭೀಮೇಶ ಕೆಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read