HomeLatest Newsಅತ್ಯಾಚಾರ ಎಸಗಿ ಬಾಲಕಿ ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ

ಅತ್ಯಾಚಾರ ಎಸಗಿ ಬಾಲಕಿ ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ

ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಅಪರಾಧಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೋ) ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ಆಳಂದ ತಾಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ(28) ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾನೆ. ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹಲವಾರು ಪ್ರತಿಭಟನೆಗಳು ನಡೆದಿದ್ದವು.

2023ರ ಜುಲೈ 15ರಂದು ಪುಸ್ತಕ ತರಲು ಆಳಂದ ತಾಲೂಕಿನ ಗ್ರಾಮವೊಂದರಿಂದ ಮತ್ತೊಂದು ಗ್ರಾಮಕ್ಕೆ 11 ವರ್ಷದ ಬಾಲಕಿ ನಡೆದುಕೊಂಡು ಹೋಗುವಾಗ ಕೃಷಿ ಕೆಲಸ ಮಾಡುತ್ತಿದ್ದ ಗುಂಡೇರಾವ ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಸಾಯಿಸಿ ಪಕ್ಕದ ಹೊಲದಲ್ಲಿದ್ದ ಬಾವಿಗೆ ಮೃತ ದೇಹ ಎಸೆದಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖಾಧಿಕಾರಿ ಭಾಸು ಚವ್ಹಾಣ್ ನೇತೃತ್ವದಲ್ಲಿ ನಿಂಬರ್ಗಾ ಠಾಣೆ ಪೊಲೀಸರು ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ ಗಲ್ಲು ಶಿಕ್ಷೆ, ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂಪಾಯಿಗಳನ್ನು ಮೃತ ಬಾಲಕಿಯ ತಾಯಿಗೆ ನೀಡುವಂತೆ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular