HomeLatest NewsGOOD NEWS: ಅಡುಗೆ ಅನಿಲ ಸಂಪರ್ಕ ಪಡೆಯಲು ಸಹಾಯಧನ, ಬಡ ವಿದ್ಯಾರ್ಥಿಗಳಿಗೆ ವಿಶೇಷ ನೆರವು

GOOD NEWS: ಅಡುಗೆ ಅನಿಲ ಸಂಪರ್ಕ ಪಡೆಯಲು ಸಹಾಯಧನ, ಬಡ ವಿದ್ಯಾರ್ಥಿಗಳಿಗೆ ವಿಶೇಷ ನೆರವು

ಚಿತ್ರದುರ್ಗ: ನಗರಸಭೆಯ ಶೇ.5 ಹಾಗೂ ಶೇ.7.25 ರ ಅನುದಾನದಡಿ 2025-26ನೇ ಸಾಲಿಗೆ ದಿವ್ಯಾಂಗ ಅನಿಲ ರಹಿತ ಕುಟುಂಬಗಳಿಗೆ ಅನಿಲ ಸಂಪರ್ಕ ಪಡೆಯಲು ಸಹಾಯ ಧನ ಒದಗಿಸಲು ಹಿರಿಯೂರು ನಗರಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ 1 ಸಿಲಿಂಡರ್ ಹಾಗೂ 1 ಸ್ಟೌವ್‌ ಅನ್ನು ಮಾರ್ಗಸೂಚಿಗಳ ಅನುಸಾರ ನೀಡಲಾಗುವುದು. ಶೇ.5 ಹಾಗೂ ಶೇ.7.25 ರ ಅನುದಾನದಡಿ ಬಡ ವಿದ್ಯಾರ್ಥಿಗಳಿಗೆ ವಿಶೇಷ ನೆರವು ಸಹ ನೀಡಲಾಗತ್ತದೆ. ನಗರಸಭೆ ವ್ಯಾಪ್ತಿಯ ದಿವ್ಯಾಂಗ ಹಾಗೂ ಬಡ ವಿದ್ಯಾರ್ಥಿಗಳು ಜೂನ್ 10 ರ ಒಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಪೌರಾಯುಕ್ತ ಎ.ವಾಸೀಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular