HomeIndiaಅಡುಗೆ ಅನಿಲ ಬೆಲೆ ಏರಿಕೆ ಹೊಸ ವರ್ಷದ ಫಸ್ಟ್ ಗಿಫ್ಟ್, ಇದು ಕೇವಲ ಆರಂಭ; ಕೇಂದ್ರಕ್ಕೆ...

ಅಡುಗೆ ಅನಿಲ ಬೆಲೆ ಏರಿಕೆ ಹೊಸ ವರ್ಷದ ಫಸ್ಟ್ ಗಿಫ್ಟ್, ಇದು ಕೇವಲ ಆರಂಭ; ಕೇಂದ್ರಕ್ಕೆ ಕಾಂಗ್ರೆಸ್ ತರಾಟೆ

ನವದೆಹಲಿ: ವಾಣಿಜ್ಯ ಅಡುಗೆ ಅನಿಲದ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಇದು ಜನರಿಗೆ ಸರ್ಕಾರದ ಹೊಸ ವರ್ಷದ ಉಡುಗೊರೆ ಎಂದು ವ್ಯಂಗ್ಯವಾಗಿ ಟೀಕಿಸಿದ್ದು, ಇದು ಕೇವಲ ಆರಂಭ ಎಂದು ಹೇಳಿದೆ.

ಹೊಸ ವರ್ಷದ ಮೊದಲ ಉಡುಗೊರೆ, ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಈಗ 25 ರೂ. ದುಬಾರಿಯಾಗಿದೆ. ಇದು ಪ್ರಾರಂಭವಷ್ಟೇ ಎಂದು ಕಾಂಗ್ರೆಸ್ ಹಿಂದಿಯಲ್ಲಿ ಟ್ವೀಟ್ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ ಅಡುಗೆ ಅನಿಲದ ಬೆಲೆಗಳು ಕಳೆದೆರಡು ವರ್ಷಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಬಡ, ಮಧ್ಯಮ ವರ್ಗದವರಿಗೆ ಹೊರೆಯಾಗಿ ಮನೆಯ ಬಜೆಟ್‌ ಗಳನ್ನು ಹೆಚ್ಚಿಸಿದೆ. ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದೆ.

2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹಬಳಕೆದಾರರ ಬೆಲೆ 410 ರೂ.ನಿಂದ 1,000 ರೂ.ಗೆ ಏರಿದೆ. ಇಂಧನ ಬೆಲೆಗಳಲ್ಲಿನ ತ್ವರಿತ ಏರಿಕೆಯೊಂದಿಗೆ ಅಗತ್ಯ ವಸ್ತುಗಳ ದರಗಳನ್ನು ಹೆಚ್ಚಿಸಿತು, ಇದರಿಂದ ಬಡ, ಮಧ್ಯಮ ವರ್ಗದ ಕುಟುಂಬಗಳು ಹೆಣಗಾಡುತ್ತಿವೆ.

ಇಂಧನ ಬೆಲೆ ಏರಿಕೆಯ ಬಗ್ಗೆ ಪ್ರಶ್ನಿಸಿದಾಗ ಸರ್ಕಾರವು ಕಚ್ಚಾ ತೈಲದ ಅಂತರರಾಷ್ಟ್ರೀಯ ದರಗಳನ್ನು ಎತ್ತಿ ತೋರಿಸಿದೆ. ಈಗ ಅಂತರಾಷ್ಟ್ರೀಯ ದರಗಳು ಇಳಿದಿದ್ದರೂ ದರವನ್ನು ಏಕೆ ಕಡಿತಗೊಳಿಸಿಲ್ಲ ಎಂದು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular