HomeLatest Newsತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಜನರು ತಂಪುಪಾನೀಯಗಳ ಮೊರೆ ಹೋಗುವುದು ಹೆಚ್ಚು. ಅದರಲ್ಲಿಯೂ ಮಕ್ಕಳಿಗೆ ತಂಪು ಪಾನೀಯಗಳೆಂದರೆ ಎಲ್ಲಿಲ್ಲದ ಪ್ರೀತಿ. ಆದರೆ ಮಕ್ಕಳಿಗೆ ತಂಪು ಪಾನೀಯ ಕೊಡುವ ಮುನ್ನ ಪೋಷಕರು ಎಚ್ಚರಿಕೆ ವಹಿಸುವ ಅಗತ್ಯವಿದೆ.

ತಂಪುಪಾನೀಯಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಔಷಧ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದೆ. ತಂಪುಪಾನೀಯಗಳಲ್ಲಿ ವಿಷಕಾರಿ ಅಂಶಗಳ ಇರುವಿಕೆ ಮಕ್ಕಳ ಆರೋಗ್ಯಕ್ಕೆ ಹಾನಿಕರವಾಗಬಹುದು ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಔಷಧ ನಿಯಂತ್ರಣ ಇಲಾಖೆಗೆ ಮನವಿ ಮಾಡಿದೆ. ಮಕ್ಕಳ ಆರೋಗ್ಯದ ರಕ್ಷಣೆಗಾಗಿ ಈ ತನಿಖೆ ಅನಿವಾರ್ಯವಾಗಿದೆ ಎಂದು ಆಯೋಗ ತಿಳಿಸಿದೆ. ತಂಪುಪಾನೀಯಗಳ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಇಲಾಖೆಯು ಸೂಕ್ತ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ಈ ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ.

ಟಿನ್ ರೂಪದಲ್ಲಿ ಈ ಡ್ರಿಂಕ್ಸ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಶಾಲಾ ಕಾಲೇಜಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಾಗಿ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಆಧರಿಸಿ ಮಕ್ಕಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಔಷದ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದ್ದು, ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡಿದಂತೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular