HomeKarnatakaರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು: ಸಿಎಂ ಸಿದ್ಧರಾಮಯ್ಯ

ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ” ನೂತನ ಆಡಳಿತ ಕಚೇರಿಯಾದ ‘ಸಹಕಾರ ಸಮೃದ್ಧಿ ಸೌಧ’ವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನಾನೇ ನೆರವೇರಿಸಿದ್ದೆ. ಮೂರು ವರ್ಷಗಳಲ್ಲಿ 19.43 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ. ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು ಶಾಲೆ, ಪಂಚಾಯತಿ ಮತ್ತು ಸಹಕಾರ ಸಂಘ ಇರಲೇಬೇಕು, ಆಗ ಮಾತ್ರ ಆ ಊರಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದಿದ್ದರು. ಪ್ರಸ್ತುತ ಹಾಲಿನ ಸೊಸೈಟಿಗಳಾದ ನಂತರ ಪ್ರತಿ ಊರಿನಲ್ಲಿ ಇದು ಸಾಧ್ಯವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ ಎಂಬ ಸಹಕಾರಿ ತತ್ವದಡಿ ರಾಜ್ಯ ಅಭಿವೃದ್ಧಿಯಾಗುತ್ತಿದೆ”. ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು. 60% ಜನ ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮೂಲಕ ನೀಡಲಾಗುತ್ತಿದೆ ಎಂದರು

ಹಾಲಿನ ಸೊಸೈಟಿಗಳು ಬಂದ ನಂತರ ರೈತರ ಪರಿಸ್ಥಿತಿ ಉತ್ತಮವಾಗಿದ್ದು, ದಿನವೊಂದಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅತ್ಯಂತ ಲಾಭದಾಯಕವಾದ ಉಪಕಸುಬಾಗಿ ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ.

ಹಿಂದೆ ನಾನು ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳನ್ನು ಹಾಲು ಡೈರಿಯೊಂದಿಗೆ ಸೇರ್ಪಡೆ ಮಾಡಲಾಯಿತು. ಇದರಿಂದ ಹಾಲು ಉತ್ಪಾದನೆ ಹೆಚ್ಚಾಗಲು ಸಾಧ್ಯವಾಯಿತು. ಸಹಕಾರ ಸೌಧದಲ್ಲಿ ಸೇವೆ ಉತ್ತಮವಾಗಿರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಕೆ.ಪಾಟೀಲ್, ಶಾಸಕ ರಿಜ್ವಾನ್ ಅರ್ಷದ್ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular