ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಸೌಲಭ್ಯಗಳಿಗೆ ಸಹಕಾರ ಸಂಘದ ಸದಸ್ಯತ್ವಕ್ಕೆ ಅರ್ಜಿ

ದಾವಣಗೆರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮವನ್ನು ನೂತನವಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

ಈಗಾಗಲೇ ವಿವಿಧ ಸಂಸ್ಥೆಗಳ ಮೂಲಕ ಹೊರಗುತ್ತಿಗೆಯಡಿ ಟೆಂಡರ್ ಮೂಲಕ ಸೇವೆಯನ್ನು ಸಲ್ಲಿಸಲಾಗುತ್ತಿದ್ದು, ಈ ಎಲ್ಲಾ ಹೊರಗುತ್ತಿಗೆ ನೌಕರರು ಇನ್ನು ಮುಂದೆ ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘದಡಿಯಲ್ಲಿ ಕೆಲಸ ನಿರ್ವಹಿಸುವರು. ಈ ನೌಕರರಿಗೆ ಜಿಲ್ಲಾ ಸಂಘದಿಂದಲೇ ನೇರವಾಗಿ ವೇತನ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಹೊರಗುತ್ತಿಗೆ ನೌಕರರು ಈ ಸಹಕಾರ ಸಂಘದ ಸದಸ್ಯರಾಗಿರುವರು.

ಆದ್ದರಿಂದ ಹೊರಗುತ್ತಿಗೆ ನೌಕರ ಸಿಬ್ಬಂದಿಯವರು ಸಂಘದ ಸದಸ್ಯತ್ವ ಪಡೆಯಬಹುದಾಗಿದ್ದು, ತಮ್ಮ ಇಲಾಖೆ ಮುಖ್ಯಸ್ಥರುಗಳಿಂದ ಅರ್ಜಿ ಪಡೆದು ನೋಂದಣಿ ಮಾಡಿಕೊಳ್ಳಲು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read