ನಾಗ್ಪುರ: ನಾಗ್ಪುರ ಜಿಲ್ಲೆಯಲ್ಲಿ ತಮ್ಮ ಸ್ನೇಹಿತ ಪೊಲೀಸ್ ಕಾನ್‌ಸ್ಟೆಬಲ್ ಅವರ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಮೇಲೆ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕೊಂಡಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಮುಂಬೈನ ವಿನೋಬಾ ಭಾವೆ ನಗರ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಪತಿ ಗಡ್ಚಿರೋಲಿಯ ನಿವಾಸಿಗಳು ಎಂದು ಹೇಳಿದ್ದಾರೆ.