Viral Video: ತಾಯಿ – ಮಗು ಪ್ರಾಣ ಉಳಿಯಲು ಕಾರಣವಾಯ್ತು ಪೊಲೀಸ್‌ ಸಮಯಪ್ರಜ್ಞೆ

Video: Cop Saves Woman's Life Who Slipped While Getting Off Moving Trainಚಲಿಸುತ್ತಿದ್ದ ರೈಲಿನಿಂದ ಇಳಿಯಲು ಮುಂದಾದ ತಾಯಿ ಮತ್ತು ಆಕೆಯ ಮಗುವನ್ನ ಪೊಲೀಸ್ ಸಮಯಪ್ರಜ್ಞೆಯಿಂದ ಕಾಪಾಡಿದ್ದು ಈ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಮಹಿಳೆ ಮತ್ತು ಆಕೆಯ ಮಗು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಮುಂದಾದಾಗ ಕಾಲು ಜಾರಿ ಬಿದ್ದಿದ್ದಾರೆ. ಉತ್ತರಪ್ರದೇಶದ ಕಾನ್ಪುರ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಅಲ್ಲೇ ಫ್ಲಾಟ್ ಫಾರ್ಮ್ ನಲ್ಲಿದ್ದ ಪೊಲೀಸ್ ಅಧಿಕಾರಿಯ ಸಮಯೋಚಿತ ಕಾರ್ಯಾಚರಣೆಯಿಂದ ಅವರಿಬ್ಬರೂ ಅಪಾಯದಿಂದ ಪಾರಾದರು.

ಈ ಘಟನೆ ಅಲ್ಲೇ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಉತ್ತರ ಪ್ರದೇಶ ಪೊಲೀಸರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕ್ಲಿಪ್‌ನಲ್ಲಿ ಮಹಿಳೆಯೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಬ್ಯಾಗ್ ಎಸೆದಿದ್ದಾರೆ. ನಂತರ ಚಲಿಸುವ ರೈಲಿನಿಂದ ಮಗುವಿನೊಂದಿಗೆ ಇಳಿಯಲು ಪ್ರಯತ್ನಿಸುತ್ತಿದ್ದಾರೆ.

ಪ್ಲಾಟ್‌ಫಾರಂ ಮೇಲೆ ಕಾಲು ಇಟ್ಟ ತಕ್ಷಣ ಬ್ಯಾಲೆನ್ಸ್ ಕಳೆದುಕೊಂಡು ಮಗು ಸಮೇತ ರೈಲಿನಿಂದ ಕೆಳಗೆ ಬಿದ್ದಿದ್ದಾರೆ. ಕೆಲವೇ ಸೆಕೆಂಡುಗಳಲ್ಲಿ, ಪೊಲೀಸ್ ಅಧಿಕಾರಿ ಮಹಿಳೆಯ ಬಳಿ ಓಡಿ ಬಂದು ತಾಯಿ – ಮಗನನ್ನು ಕಾಪಾಡಿದ್ದಾರೆ.

https://twitter.com/apnnewsindia/status/1632312032438505472

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read