HomeInternationalಪ್ರವಾದಿಗೆ ನಿಂದಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ, ಠಾಣೆಗೆ ಕರೆತಂದು ಗುಂಡಿಟ್ಟ ಪೊಲೀಸರು

ಪ್ರವಾದಿಗೆ ನಿಂದಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ, ಠಾಣೆಗೆ ಕರೆತಂದು ಗುಂಡಿಟ್ಟ ಪೊಲೀಸರು

ಇಸ್ಲಾಮಾಬಾದ್: ಪ್ರವಾದಿಗೆ ಅವಮಾನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಆತನನ್ನು ವಶಕ್ಕೆ ಪಡೆದ ಪಾಕಿಸ್ತಾನ ಪೊಲೀಸರು ಠಾಣೆಯಲ್ಲಿಯೇ ಗುಂಡಿಗೆ ಹತ್ಯೆ ಮಾಡಿದ್ದಾರೆ. ಕ್ವೆಟ್ಟಾ ನಗರದಲ್ಲಿ ಸೈಯದ್ ಖಾನ್ ಎಂಬಾತನನ್ನು ಗುಂಡು ಹಾರಿಸಿ ಪೊಲೀಸರು ಹತ್ಯೆ ಮಾಡಿದ್ದಾರೆ. ಗುಂಡಿಕ್ಕಿದ ಪೊಲೀಸ್ ಅಧಿಕಾರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಕ್ವೆಟ್ಟಾ ನಗರದ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಖುರ್ರಮ್ ಮಾಹಿತಿ ನೀಡಿ, ಪ್ರವಾದಿ ನಿಂದಿಸಿದ ವದಂತಿ ಹಿನ್ನೆಲೆಯಲ್ಲಿ ಜನ ರೊಚ್ಚಿಗೆದ್ದು ಸೈಯದ್ ಖಾನ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತನನ್ನು ಜನರ ಗುಂಪಿನಿಂದ ಪೊಲೀಸರು ರಕ್ಷಿಸಿ ಠಾಣೆಗೆ ಕರೆತಂದಿದ್ದಾರೆ. ಅಲ್ಲಿಯೇ ಆತನಿಗೆ ಗುಂಡಿಗೆ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular