ಕಾಪಿರೈಟ್ ಉಲ್ಲಂಘನೆ ಆರೋಪ: ‘ಶಾಖಾಹಾರಿ’ ಚಿತ್ರಕ್ಕೆ ಕಾನೂನು ಜಯ

ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ‘ಶಾಖಾಹಾರಿ’ ಸಿನಿಮಾದಲ್ಲಿ ರಸಿಕ ರಸಿಕಾ ಹಾಡನ್ನು ಬಳಸಿ ಕಾಪಿರೈಟ್ ಉಲ್ಲಂಘಿಸಲಾಗಿದೆ ಎಂದು ಸಾರೆಗಾಮ ಇಂಡಿಯಾ ಲಿಮಿಟೆಡ್ ಸಂಸ್ಥೆ ಆರೋಪಿಸಿ ಅಮೆಜಾನ್ ಪ್ರೈಮ್ ಗೆ ದೂರು ನೀಡಿತ್ತು ಹಾಗೂ ಕೀಳಂಬಿ ಮೀಡಿಯಾ ಲ್ಯಾಬ್ ಗೆ ಹಣದ ಬೇಡಿಕೆ ಇಟ್ಟಿತ್ತು.

ಇದನ್ನು ಪ್ರಶ್ನಿಸಿ ಕೀಳಂಬಿ ಮೀಡಿಯಾ ಲ್ಯಾಬ್ ಶಿವಮೊಗ್ಗ ಕಮರ್ಷಿಯಲ್ ಕೋರ್ಟ್ ನಲ್ಲಿ ಪ್ರಕರಣವನ್ನು ದಾಖಲಿಸಿತ್ತು. ನ್ಯಾಯಾಲಯವು ಕೀಳಂಬಿ ಮೀಡಿಯಾ ಲ್ಯಾಬ್ ಪರ ವಕೀಲರ ವಾದವನ್ನು ಆಲಿಸಿ, ಸಾರೆಗಾಮ ಇಂಡಿಯಾ ಸಂಸ್ಥೆ ‘ಶಾಖಾಹಾರಿ’ ಸಿನೆಮಾದಲ್ಲಿ ಯಾವುದೇ ಕಾಪಿರೈಟ್ ಉಲ್ಲಂಘನೆ ಆಗಿದೆ ಎಂದು ಯಾವುದೇ ಹೇಳಿಕೆ ನೀಡಬಾರದು ಎಂದು ಹಾಗೂ ಅಮೆಜಾನ್ ಪ್ರೈಮ್ ರವರು ತಮ್ಮ ಒಟಿಟಿ ಪ್ಲಾಟ್ ಫಾರಂ ನಿಂದ ಶಾಖಾಹಾರಿ ಸಿನೆಮಾವನ್ನು ತೆಗೆಯಬಾರದೆಂದು ಮಧ್ಯಂತರ ಆದೇಶ ನೀಡಿದೆ. ಕೀಳಂಬಿ ಮೀಡಿಯಾ ಲ್ಯಾಬ್ ಪರ ವಕೀಲರಾದ ಬೆಂಗಳೂರಿನ ರವಿಶಂಕರ್ ಭಟ್ ವಾದಿಸಿದ್ದರು.

‘ಶಾಖಾಹಾರಿ’ ಸಿನಿಮಾ ಈ ವರ್ಷ ಚಿತ್ರಮಂದಿರಗಳಲ್ಲಿ ಮತ್ತು ಓಟಿಟಿಯಲ್ಲಿ ಕೆಲವೇ ಕೆಲವು ಹೆಸರು ಮಾಡಿರುವ  ಕನ್ನಡ ಸಿನಿಮಾಗಳಲ್ಲಿ ಒಂದಾಗಿದೆ. ದುರದೃಷ್ಟವಶಾತ್ ಸಾರೆಗಾಮ ಇಂಡಿಯಾ ಸಂಸ್ಥೆ ಸುಳ್ಳು ಆರೋಪ ಮಾಡಿದ್ದು ಬೇಸರವಾಗಿತ್ತು. ಆದರೆ ಕೋರ್ಟ್ ಸಿನಿಮಾದಲ್ಲಿ ಯಾವುದೇ ಕಾಫಿ ರೈಟ್ ಉಲ್ಲಂಘನೆಯಾಗಿಲ್ಲ, ಕಾನೂನಾತ್ಮಕ ವಾಗಿ ಎಲ್ಲವೂ ಸರಿಯಾಗಿದೆ ಎಂದು ಮಧ್ಯಂತರ ತೀರ್ಪು ನೀಡಿದೆ ಎಂದು ನಿರ್ಮಾಪಕ ರಾಜೇಶ್ ಕೀಳಂಬಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read