HomeIndiaBREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು

BREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಕ್ಕಿಯ ರಭಸಕ್ಕೆ 4 ಬೋಗಿಗಳು ಹಳಿಯಿಂದ ಉರುಳಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ರಕ್ಷಣಾ ತಂಡಗಳು ಧಾವಿಸಿವೆ.

ಏತನ್ಮಧ್ಯೆ ಒಡಿಶಾದ ವಿಶೇಷ ಪರಿಹಾರ ಆಯುಕ್ತರ ಕಚೇರಿ, ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತೆರಳಿವೆ. ಬಾಲಸೋರ್ ಕಲೆಕ್ಟರ್ ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ SRC ಗೆ ತಿಳಿಸಲು ಸ್ಥಳಕ್ಕೆ ತಲುಪಲು ಸೂಚಿಸಲಾಗಿದೆ ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular